ಭಾರತ, ಏಪ್ರಿಲ್ 24 -- ಐಪಿಎಲ್ 2025ರ ಆವೃತ್ತಿಯ 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ (CSK vs SRH) ತಂಡಗಳು ಮುಖಾಮುಖಿಯಾಗುತ್ತಿವೆ. ಏಪ್ರಿಲ್ 25ರ ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಪ್ರಸಕ್ತ ಆವೃತ್ತಿಯಲ್ಲಿ ಈ ಎರಡೂ ತಂಡಗಳು ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿವೆ. ತಂಡಗಳು ಬ್ಯಾಟಿಂಗ್‌ ಮಾತ್ರವಲ್ಲದೆ ಬೌಲಿಂಗ್‌ನಲ್ಲೂ ವಿಫಲವಾಗಿರುವುದು ತಂಡದ ಕಳಪೆ ಪ್ರದರ್ಶನಕ್ಕೆ ಸಾಕ್ಷಿ.

ಈ ಎರಡೂ ತಂಡಗಳು ಟೂರ್ನಿಯಲ್ಲಿ ಈವರೆಗೆ ಆಡಿದ 8 ಪಂದ್ಯಗಳಲ್ಲಿ ಕೇವಲ 2ರಲ್ಲಿ ಮಾತ್ರ ಗೆದ್ದಿವೆ. ಆದರೆ ಕಡಿಮೆ ನೆಟ್‌ ರನ್‌ ರೇಟ್‌ ಹೊಂದಿರುವ ಸಿಎಸ್‌ಕೆ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಉಭಯ ತಂಡಗಳು ಕೂಡಾ ಪ್ಲೇಆಫ್‌ಗೆ ಅರ್ಹತೆ ಪಡೆಯುವ ಸಾಧ್ಯತೆಗಳು ಬಹುತೇಕ ಕಡಿಮೆ ಇದೆ. ಆದರೂ, ಮುಂದಿನ ಎಲ್ಲಾ ಪಂದ್ಯಗಳಲ್ಲಿ ಗೆದ್ದರೆ ಎರಡೂ ತಂಡಗಳಿಗೂ ಪ್ಲೇ ಆಫ್‌ ಎಂಟ್ರಿಕೊಡುವ ಬಾಗಿಲುಗಳು ತೆರೆದ...