Bangalore, ಮಾರ್ಚ್ 17 -- ತಮ್ಮ ಕ್ರಿಕೆಟ್ ಅಭಿಮಾನಿಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ಶುಭ ಸುದ್ದಿಯೊಂದನ್ನು ನೀಡಿದೆ. ಐದು ಬಾರಿಯ ಚಾಂಪಿಯನ್ ಸಿಎಸ್ಕೆ (CSK) ತನ್ನ ತವರಿನಲ್ಲಿ ನಡೆಯುವ ಐಪಿಎಲ್ ಪಂದ್ಯಗಳಲ್ಲಿ ಅಭಿಮಾನಿಗಳಿಗೆ ವಿಶೇಷ ಆಫರ್ ನೀಡಿದೆ. ಅಭಿಮಾನಿಗಳಿಗೆ ಸೌಕರ್ಯಗಳನ್ನು ಹೆಚ್ಚಿಸುವ ಸಲುವಾಗಿ ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ (CMRL) ಮತ್ತು ಮೆಟ್ರೋಪಾಲಿಟನ್ ಸಾರಿಗೆ ನಿಗಮ (MTC) ಜೊತೆ ಮಾಡಿಕೊಂಡ ವಿಶೇಷ ಒಪ್ಪಂದವನ್ನು ಸಿಎಸ್ಕೆ ಘೋಷಿಸಿದೆ. ಸಿಎಂಆರ್ಎಲ್ ಜೊತೆಗಿನ ಪಾಲುದಾರಿಕೆಯಲ್ಲಿ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗುವ ಪಂದ್ಯದ ಟಿಕೆಟ್ಗಳನ್ನು ಹೊಂದಿರುವ ಅಭಿಮಾನಿಗಳು ಮೆಟ್ರೋ ರೈಲಿನಲ್ಲಿ ಮತ್ತು ಬಸ್ನಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಬಹುದು.
ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ, ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಕ್ರಿಕೆಟ್ ಅಭಿಮಾನಿಗಳು ಸರತಿ ಸಾಲಿನಲ್ಲಿ ಕಾಯುವ ಅವಶ್ಯಕತೆ ಇಲ್ಲ. ಕ್ಯೂಆರ್ ಕೋಡ್ ಹೊಂದಿರುವ ಪಂದ್ಯದ ಟಿಕೆಟ್ಗಳನ್ನು ಬಸ್ ಮತ್ತು ಮೆಟ್ರೋದಲ್ಲಿ ಪ್ರಯಾಣಿಸಲು ನೆರವಾಗುವಂ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.