ಭಾರತ, ಏಪ್ರಿಲ್ 16 -- 2025ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 31 ಪಂದ್ಯಗಳು ಮುಕ್ತಾಯಗೊಂಡಿವೆ. ಡೆಲ್ಲಿ ಕ್ಯಾಪಿಟಲ್ಸ್ ಹೊರತುಪಡಿಸಿ ಎಲ್ಲಾ ತಂಡಗಳು 6 ಮತ್ತು 7 ಪಂದ್ಯಗಳನ್ನಾಡಿವೆ. ಇದರ ನಡುವೆ 10 ತಂಡಗಳ ಪ್ಲೇಆಫ್ ಲೆಕ್ಕಾಚಾರ ಶುರುವಾಗಿದೆ. ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಅಗ್ರಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್​ ಕೊನೆಯ ಸ್ಥಾನದಲ್ಲಿದೆ. ಆದರೆ ಯಾವ ತಂಡಕ್ಕೆ ಎಷ್ಟು ಅವಕಾಶ ಇದೆ? ಪ್ಲೇಆಫ್ ತಲುಪಲು ಒಂದು ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂದು ನೋಡೋಣ.

ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ 6 ಪಂದ್ಯಗಳಲ್ಲಿ 4 ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಗುಜರಾತ್ ತಂಡಕ್ಕೆ ಇನ್ನು 8 ಪಂದ್ಯಗಳು ಮಾತ್ರ ಉಳಿದಿವೆ. ಈ ಪೈಕಿ 4 ಗೆದ್ದರೆ 16 ಅಂಕಗಳೊಂದಿಗೆ ಮುಂದಿನ ಹಂತಕ್ಕೆ ಮುನ್ನಡೆಯಬಹುದು.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ 5 ಪಂದ್ಯಗಳನ್ನು ಆ...