ಬೆಂಗಳೂರು, ಮೇ 17 -- ಐಪಿಎಲ್‌ ಸೇರಿದಂತೆ ಕ್ರಿಕೆಟ್‌ ಪಂದ್ಯ ನಡೆಯುವ ಸಮಯದಲ್ಲಿ ಕ್ರಿಕೆಟಿಗರ ಅಭಿಮಾನಿಗಳು ಮೈದಾನಕ್ಕೆ ನುಗ್ಗುವುದು ಹೊಸದೇನಲ್ಲ. ಈ ಹಿಂದೆ ಹಲವು ಬಾರಿ ಇಂಥಾ ಪ್ರಸಂಗಗಳು ನಡೆದಿದೆ. ಐಪಿಎಲ್‌ನಲ್ಲಿ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ, ಎಂಎಸ್‌ ಧೋನಿಯಂತಾ ಆಟಗಾರರು ಹಲವು ಬಾರಿ ಇಂಥಾ ಸನ್ನಿವೇಶ ಎದುರಾಗಿದೆ. ಅಭಿಮಾನಿಗಳು ಮೈದಾನಕ್ಕೆ ನುಗ್ಗಿ ಆಟಗಾರರನ್ನು ಅಪ್ಪಿಕೊಂಡು ಖುಷಿಪಡುತ್ತಾರೆ. ಇದು ಭದ್ರತೆಯನ್ನು ಉಲ್ಲಂಘಿಸಿ ಅಭಿಮಾನಿಗಳು ಮಾಡುವ ಕೆಲಸ. ಈ ರೀತಿ ಭದ್ರತಾ ನಿಯಮ ಉಲ್ಲಂಘನೆಗೆ ಅವಕಾಶವಿಲ್ಲ. ಆದರೂ, ಭಂಡಧೈರ್ಯ ಮಾಡಿ ಮೈದಾನಕ್ಕೆ ನುಗ್ಗುತ್ತಾರೆ. ಆನಂತರ ಎದುರಾಗಬಹುದಾದ ಪರಿಣಾಮಗಳ ಬಗ್ಗೆ ಅವರಿಗೆ ಅರಿವಿರುವುದಿಲ್ಲ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡಗಳ ನಡುವೆ ಪಂದ್ಯ ನಡೆಯುತ್ತಿದೆ. ಪಂದ್ಯದ ಸಮಯದಲ್ಲಿ ಮೈದಾನಕ್ಕೆ ನುಗ್ಗಿ ವಿರಾಟ್‌ ಕೊಹ್ಲಿಯನ್ನು ಅಪ್ಪಿಕೊಳ್ಳುವುದಾಗಿ ಸವಾಲು ಹಾಕಿದ್ದ ವ್ಯಕ್ತಿಯೊ...