ಭಾರತ, ಏಪ್ರಿಲ್ 30 -- ನವದೆಹಲಿ: ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಇಂದು (ಏಪ್ರಿಲ್ 30) ಐಸಿಎಸ್‌ಇ ಮತ್ತು ಐಎಸ್‌ಸಿ ಫಲಿತಾಂಶಗಳನ್ನು ಪ್ರಕಟ ಮಾಡಿದೆ. ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಐಸಿಎಸ್‌ಸಿಇ ಯ ಅಧಿಕೃತ ವೆಬ್‌ಸೈಟ್ cisce.org ನಲ್ಲಿ ಫಲಿತಾಂಶ ಪರಿಶೀಲಿಸಬಹುದು. results.cisce.org ಈ ವೆಬ್‌ಸೈಟ್‌ನಲ್ಲೂ ಫಲಿತಾಂಶ ನೋಡಬಹುದು.

ಈ ವರ್ಷ ಐಸಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಒಟ್ಟಾರೆ ಶೇ. 99.09 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, ಐಎಸ್‌ಸಿ 12ನೇ ತರಗತಿ ಪರೀಕ್ಷೆಯಲ್ಲಿ ಶೇ 99.02 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ತಿಳಿಸಿದೆ.

ಒಟ್ಟು 2,52,557 ಅಭ್ಯರ್ಥಿಗಳು ಐಸಿಎಸ್ಇ ಪರೀಕ್ಷೆ ಬರೆದಿದ್ದು, ಅದರಲ್ಲಿ 2,50,249 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದೇ ರೀತಿ, 99,551 ವಿದ್ಯಾರ್ಥಿಗಳು ಐಎಸ್ಸಿ ಪರೀಕ್ಷೆ ಬರೆದಿದ್ದು, ಅದರಲ್ಲಿ 98,578 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ಐಸಿಎಸ್‌ಇ ಪ...