ಭಾರತ, ಮೇ 23 -- ಬೆಂಗಳೂರು: ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ಬಗೆಗಿನ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದೆ. ಐವರು ಪ್ರತಿಭಾನ್ವಿತ ನಿರ್ದೇಶಕರು ಅತಿಥಿಗಳಾಗಿ ಆಗಮಿಸಿದ್ದು ವಿಶೇಷ. ಬೀರ್ ಬಲ್ ಖ್ಯಾತಿಯ ಶ್ರೀನಿ, ಮಹಿರಾ ಖ್ಯಾತಿಯ ನಿರ್ದೇಶಕ ಮಹೇಶ್ ಗೌಡ, ಡೊಳ್ಳು ಖ್ಯಾತಿಯ ನಿರ್ದೇಶಕ ಸಾಗರ್ ಪುರಾಣಿಕ್, ಆಯುಷ್ ಮಲ್ಲಿ, ಚೆಲುವರಾಜ್ ಮುಂತಾದವರು ಈ ಪತ್ರಿಕಾಗೋಷ್ಠಿಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಈ ಸಿನಿಮಾ ಕಥೆಗೆ ಸ್ಫೂರ್ತಿಯಾದ ವಿಚಾರವನ್ನು ನಿರ್ದೇಶಕ ರತನ್ ಗಂಗಾಧರ್ ತಿಳಿಸಿದ್ದಾರೆ. "ಪುಸ್ತಕವೊಂದನ್ನು ಓದಿದಾಗ ಅದರಲ್ಲಿ ಪೆನ್ಸಿಲ್‌ನ ನಾನಾ ಸೂಕ್ಷ್ಮಗಳ ವಿವರವಿತ್ತು. ಅದನ್ನು ಐದು ಪಾತ್ರಗಳನ್ನಾಗಿಸಿ, ಅದಕ್ಕೆ ಹೊಂದಿಕೊಂಡಂತೆ ಐದು ಕಥೆಗಳನ್ನು ಸೃಷ್ಟಿಸಿ, ಆ ಕಥೆಗಳೆಲ್ಲ ಒಂದು ಬಿಂದುವಿನಲ್ಲಿ ಸಂಧಿಸುವ ಅಚ್ಚರಿಯ ಸಾರವೇ ಸೀಸ್ ಕಡ್ಡಿಯ ಆತ್ಮ" ಎಂದು ಅವರು ಹೇಳಿದ್ದಾರೆ.

ಈ ಚಿತ್ರದ...