ಭಾರತ, ಮಾರ್ಚ್ 30 -- ಬಾಲಿವುಡ್ ನಟ ಶಾಹಿದ್ ಕಪೂರ್ ಮತ್ತು ನಟಿ ಪೂಜಾ ಹೆಗ್ಡೆ ಅಭಿನಯದ ದೇವಾ ಚಿತ್ರ ಜನವರಿ 31 ರಂದು ಬಿಡುಗಡೆಯಾಯಿತು. ಈ ಹಿಂದಿ ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸಲು ವಿಫಲವಾಗಿತ್ತು. ಆದರೆ, ಇತ್ತೀಚೆಗೆ ಒಟಿಟಿಯಲ್ಲಿ ಬಿಡುಗಡೆಯಾದ ನಂತರ ಈ ಚಿತ್ರ ಟ್ರೆಂಡಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದೆ. ನೀವು ಸಹ ಮನೆಯಲ್ಲೇ ಕುಳಿತು ಈ ಸಿನಿಮಾ ವೀಕ್ಷಿಸಬಹುದು.

ದೇವಾ ಚಿತ್ರ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಪ್ರಸ್ತುತ ಅಗ್ರಸ್ಥಾನದಲ್ಲಿದೆ. ಚಲನಚಿತ್ರ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದೆ. ಫೆಬ್ರವರಿ 28ರಂದು ಒಟಿಟಿಯಲ್ಲಿ ಬಿಡುಗಡೆಯಾದ ಈ ಚಿತ್ರ ಕೇವಲ ಎರಡು ದಿನಗಳಲ್ಲಿಯೇ ನೆಟ್‌ಫ್ಲಿಕ್ಸ್‌ನಲ್ಲಿ ಟ್ರೆಂಡಿಂಗ್‌ನಲ್ಲಿ ಸಾಕಷ್ಟು ಜನ ಚಿತ್ರಮಂದಿರದಲ್ಲಿ ನೋಡಿದ್ದರೂ ಒಟಿಟಿಯಲ್ಲಿ ಈ ಸಿನಿಮಾವನ್ನು ಇಷ್ಟಪಡುತ್ತಿದ್ದಾರೆ.

ನೆಟ್‌ಫ್ಲಿಕ್ಸ್‌ನಲ್ಲಿ ದೇವಾ ಚಿತ್ರವನ್ನು ವೀಕ್ಷಿಸಿದ ಕೆಲವು ನೆಟ್ಟಿಗರು ಸಾಮಾಜಿಕ ಮಾಧ್ಯಮದಲ್ಲಿ ತಮ...