ಭಾರತ, ಫೆಬ್ರವರಿ 12 -- Abhinav Singh Suicide Case: ಒಡಿಯಾ ರ‍್ಯಾಪರ್ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಡುಬೀಸನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಅಸಹಜ ರೀತಿಯಲ್ಲಿ ಪತ್ತೆಯಾಗಿದೆ. ಅಭಿನವ್ ಸಿಂಗ್ ಸಾವಿಗೆ ಆತನ ಪತ್ನಿಯ ಕಿರುಕುಳವೇ ಕಾರಣ ಎಂದು ಅಭಿನವ್ ಸಿಂಗ್ ಕುಟುಂಬ ಆರೋಪಿಸಿದೆ. ಒಡಿಯಾ ರ‍್ಯಾಪರ್ ಅಭಿನವ್ ಸಿಂಗ್, ವೃತ್ತಿಯಲ್ಲಿ ಇಂಜಿನಿಯರ್‌. ಬೆಂಗಳೂರು ಕಾಡುಬೀಸನಹಳ್ಳಿಯಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೀತಿಯುಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಿಧ ಆಯಾಮಾಗಳಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ.

ಮಾಹಿತಿ ಅಪ್ಡೇಟ್ ಆಗುತ್ತಿದೆ.

ಗಮನಿಸಿ: ಖಿನ್ನತೆ, ಆತ್ಮಹತ್ಯೆಯ ಆಲೋಚನೆಗಳು ಬಾಧಿಸುತ್ತಿದ್ದರೆ ನಿಮ್ಮ ಗೆಳತಿ / ಗೆಳೆಯರೊಂದಿಗೆ, ಹೆತ್ತವರೊಂದಿಗೆ, ಸಂಬಂಧಿಕರು, ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಿ. ಪೊಲೀಸರ,...