ಭಾರತ, ಫೆಬ್ರವರಿ 28 -- ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ (ICC Champions Trophy 2025) ನ್ಯೂಜಿಲೆಂಡ್ ವಿರುದ್ಧದ ಹಾಗೂ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ (Team India) ಆಘಾತವಾಗಿದೆ. ದುಬೈನ ಐಸಿಸಿ ಅಕಾಡೆಮಿಯಲ್ಲಿ ನಡೆದ ತರಬೇತಿ ಶಿಬಿರವನ್ನು ತಂಡದ ಸ್ಟಾರ್ ಆಟಗಾರರು ತಪ್ಪಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ. ಹೌದು, ಭಾರತದ ನಾಯಕ ರೋಹಿತ್​ ಶರ್ಮಾ, ಉಪನಾಯಕ ಶುಭ್ಮನ್ ಗಿಲ್ ಪ್ರಾಕ್ಟೀಸ್ ಸೆಷನ್ ತಪ್ಪಿಸಿಕೊಂಡಿದ್ದಾರೆ. ಇದು ಕಿವೀಸ್ ಗುಂಪು ಪಂದ್ಯಕ್ಕೆ ಹಾಗೂ ಸೆಮಿಫೈನಲ್​ ಪಂದ್ಯಕ್ಕೆ ಲಭ್ಯತೆಯ ಬಗ್ಗೆ ಅನುಮಾನ ಹುಟ್ಟು ಹಾಕಿದೆ.

2025ರ ಚಾಂಪಿಯನ್ಸ್ ಟ್ರೋಫಿ ಗ್ರೂಪ್ ಹಂತದ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಮತ್ತು ಗಿಲ್ ಟೀಮ್ ಇಂಡಿಯಾದ ತರಬೇತಿ ಅವಧಿಯನ್ನು ತಪ್ಪಿಸಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ನಾಯಕ ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದರೆ, ಗಿಲ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಹಲವಾರು ಮಾಧ್ಯಮ ವರದಿಗಳು ಹೇಳುತ್...