Bangalore, ಜೂನ್ 14 -- ಬೆಂಗಳೂರು: ಬೈಕ್ ಟ್ಯಾಕ್ಸಿಗಳನ್ನು ನಿಯಂತ್ರಿಸಲು ಸಮಗ್ರ ನೀತಿಯನ್ನು ಹೊರಡಿಸುವವರೆಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ತಡೆಹಿಡಿಯಲು ರಾಜ್ಯ ಹೈಕೋರ್ಟ್‌ ವಿಭಾಗೀಯ ಪೀಠ ನಿರಾಕರಿಸಿದೆ. ಈ ಆದೇಶದಿಂದ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದ ಕಂಪನಿಗಳಿಗೆ ಹಿನ್ನಡೆಯಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ, ಜೂನ್‌ 20ರೊಳಗೆ ತಮ್ಮ ಅಭಿಪ್ರಯಾಗಳನ್ನು ತಿಳಿಸುವಂತೆ ಓಲಾ ಮತ್ತು ಉಬರ್‌ ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿ ಜೂನ್ 24 ರಂದು ಪ್ರಕರಣವನ್ನು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಬೈಕ್ ಟ್ಯಾಕ್ಸಿಗೆ ಅನುಮತಿ ನೀಡದಿರಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಏಕಸದಸ್ಯ ಪೀಠದ ನಿರ್ದೇಶನವನ್ನು ತಡೆಹಿಡಿಯಲು ದ್ವಿಸದಸ್ಯ ಪೀಠ ನಿರಾಕರಿಸಿದೆ. ಈ ವಿಷಯವು ಬೈಕ್ ಟ್ಯಾಕ್ಸಿ ಚಾಲಕರ ಜೀವನೋಪಾಯ ಮತ್ತ...