Bengaluru, ಮೇ 6 -- ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್ ಪಾತ್ರಗಳ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಆ ಪೈಕಿ ಇದೀಗ ಸೆಟ್ಟೇರಿದ ಸಿನಿಮಾ ʻಸರ್ಕಾರಿ ನ್ಯಾಯಬೆಲೆ ಅಂಗಡಿʼ ಸಹ ಅಂಥ ಕಂಟೆಂಟ್‌ವುಳ್ಳ ಸಿನಿಮಾ. ಇತ್ತೀಚೆಗಷ್ಟೇ ಈ ಸಿನಿಮಾ ಮುಹೂರ್ತ ಮುಗಿಸಿಕೊಂಡು, ಚಿತ್ರೀಕರಣಕ್ಕೆ ಅಣಿಯಾಗಿದೆ. ಈ ಸಿನಿಮಾ ಬಗ್ಗೆ ಇಡೀ ತಂಡ ಮಾಹಿತಿ ಹಂಚಿಕೊಂಡಿದೆ. ಮೊದಲಿಗೆ ಚಿತ್ರದ ನಾಯಕಿ ರಾಗಿಣಿ ದ್ವಿವೇದಿ ಹೇಳಿದ್ದು ಹೀಗೆ.
'ಜಯಶಂಕರ ಟಾಕೀಸ್' ಬ್ಯಾನರಿನಲ್ಲಿ ತೇಜು ಮೂರ್ತಿ ಮತ್ತು ಎಸ್. ಪದ್ಮಾವತಿ ಚಂದ್ರಶೇಖರ್ ಜಂಟಿಯಾಗಿ ನಿರ್ಮಿಸುತ್ತಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾಕ್ಕೆ ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ 'ತಾಯವ್ವ' ಎಂಬ ಸಿನಿಮಾವನ್ನು ನಿರ್ದೇಶಿಸಿದ್ದ ಸಾತ್ವಿಕ್ ಪವನ್ ಕುಮಾರ್ ಈ ಸಿನಿಮಾಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.