ಭಾರತ, ಏಪ್ರಿಲ್ 24 -- ಬೆಂಗಳೂರು: 2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು. ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ನಿರ್ವಹಿಸಲಿದೆ.ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಯಂತೆ ಬಿಳಿಜೋಳ-ಹೈಬ್ರಿಡ್ ಕ್ವಿಂಟಾಲ್‌ಗೆ ರೂ.3,371 ಮತ್ತು ಬಿಳಿಜೋಳ-ಮಾಲ್ದಂಡಿ ಕ್ವಿಂಟಾಲ್‌ಗೆ ರೂ.3,421 ನಿಗದಿಪಡಿಸಲಾಗಿದೆ.ನೋಂದಣಿ ಮತ್ತು ಖರೀದಿ ಅವಧಿ ಈಗಾಗಲೇ ಪ್ರಾರಂಭಗೊಂಡಿದ್ದು, ಮೇ 31 ರ ವರೆಗೆ ಖರೀದಿಸಲಾಗುವುದು. ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಜೋಳವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ, ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ...