ಭಾರತ, ಫೆಬ್ರವರಿ 26 -- ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ. ಕೆಂಪೇಗೌಡ ಅವರು ಇಂದು (ಫೆ.26) ನಿಧನರಾಗಿದ್ದಾರೆ. ಹಿರಿಯ ಲೇಖಕ ಹಾಗೂ ವಿದ್ವಾಂಸರಾದ ಕೆಂಪೇಗೌಡ ಅವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದವರು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಶೆಟ್ಟಿಹಳ್ಳಿಯಲ್ಲಿ ಮಾಧ್ಯಮಿಕ ಶಿಕ್ಷಣ ಪಡೆದರು. ಚನ್ನಪಟ್ಟಣದಲ್ಲಿ ಹೈಯರ್ ಸೆಕೆಂಡರಿ ಶಿಕ್ಷಣ ಪಡೆದರು.
ಮೈಸೂರಿನ ಸರಸ್ವತಿಪುರಂನಲ್ಲಿರುವ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಚನ್ನಪಟ್ಟಣದ ಎಚ್ ಬ್ಯಾಡ್ರಹಳ್ಳಿಯಲ್ಲಿ ಶವ ಸಂಸ್ಕಾರ ನಡೆಸುವ ಬಗ್ಗೆ ಕುಟುಂಬದ ಮೂಲಗಳು ತಿಳಿಸಿವೆ.
ವಿದ್ವಾಂಸ ಕೆಂಪೇಗೌಡ ಅವರು ಮೈಸೂರು ವಿಶ್ವವಿದ್ಯಾಲಯದಿಂದ 1961ರಲ್ಲಿ ಹಿಂದಿ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1965ರಲ್ಲಿ ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಭಾಷಾ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. A Descriptive Analysis of Irula Dialect' ವಿಷಯ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯ...
Click here to read full article from source
To read the full article or to get the complete feed from this publication, please
Contact Us.