Bengaluru, ಮೇ 24 -- ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಇದು ಕಾಂಗ್ರೆಸ್ ಸರ್ಕಾರದ ಅವಿವೇಕದ ತೀರ್ಮಾನ ಎಂದು ಹೇಳಿದ್ದಾರೆ.
1916ರಲ್ಲಿ ನಮ್ಮ ಮೈಸೂರು ಸಂಸ್ಥಾನದ ಕೃಷ್ಣರಾಜ ಒಡೆಯರ್ ಈ ಸಂಸ್ಥೆ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸೋಪ್ ದಶಕಗಳಿಂದಲೂ ಎಲ್ಲರ ಮನೆಯಲ್ಲಿ ಸ್ಥಾನ ಪಡೆದಿತ್ತು. ಈ ಸಂಸ್ಥೆಯ ಬಹುತೇಕ ವಸ್ತುಗಳನ್ನು ಬಳಸುತ್ತಿದ್ದವರೇ ಕನ್ನಡಿಗರು. ಇಂಥ ಸಂಸ್ಥೆಗೆ ಪರಭಾಷೆ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಅದು ಸಾಲದೆಂಬಂತೆ ಆರು ಕೋಟಿ ರೂ.ಗಳಿಗೂ ಹೆಚ್ಚು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.