Bengaluru, ಮೇ 7 -- ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರು ಮತ್ತು ಕರ್ನಾಟಕದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಬಾಲಿವುಡ್‍ ಗಾಯಕ ಸೋನು ನಿಗಮ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಸೋನು ನಿಗಮ್‍ ಅವರಿಗೆ ಅಸಹಕಾರ ತೋರುವುದಕ್ಕೆ ತೀರ್ಮಾನಿಸಲಾಗಿತ್ತು.

ಈಗ 'ಕುಲದಲ್ಲಿ ಕೀಳ್ಯಾವುದೋ' ಚಿತ್ರತಂಡವು ಚಿತ್ರಕ್ಕಾಗಿ ಸೋನು ನಿಗಮ್‍ ಹಾಡಿರುವ 'ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ .' ಎಂಬ ಹಾಡನ್ನು ಕಿತ್ತುಹಾಕಲು ತೀರ್ಮಾನಿಸಿದೆ. ಚೇತನ್‍ ಸೋಸ್ಕಾ ಅವರಿಂದ ಅದೇ ಹಾಡನ್ನು ಹಾಡಿಸಿ, ಅದನ್ನು ಅತೀ ಶೀಘ್ರದಲ್ಲೇ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.

ಇದನ್ನೂ ಓದಿ: ಕಾಂತಾರ ಚಾಪ್ಟರ್-1 ಶೂಟಿಂಗ್ ವೇಳೆ ಜೂನಿಯರ್ ಕಲಾವಿದ ದುರಂತ ಸಾವು; ಪಂಜುರ್ಲಿ ದೈವ ನುಡಿದ ಮಾತು ನಿಜವಾಯ್ತಾ?

ಈ ಕುರಿತು ಮಾತನಾಡಿರುವ ನಿರ್ದೇಶಕ ರಾಮ್‍ನಾರಾಯಣ್‍, 'ಸೋನು ನಿಗಮ್‍ ಇತ್ತೀಚೆಗೆ ಆಡಿರುವ ಕೆಲವು ಮಾತುಗಳು ಅವರ ವಿಕೃತ ಮನಸ್ಥಿತಿಯನ್...