Bengaluru, ಮಾರ್ಚ್ 3 -- ಟಾಲಿವುಡ್‌ನಲ್ಲಿ ನಿರ್ಮಾಣವಾಗಿದ್ದ 'ಕಲ್ಕಿ 2898 AD' ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ 600 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿತ್ತು.

ಕಳೆದ ವರ್ಷದ ಜೂನ್‌ 27ರಂದು ಮೂಲ ತೆಲುಗಿನ ಜತೆಗೆ ಕನ್ನಡ, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಿತ್ತು. ಇದೀಗ ಇದೇ ಸಿನಿಮಾ ಒಟಿಟಿ ಬಳಿಕ ಕನ್ನಡ ಕಿರುತೆರೆಗೆ ಆಗಮಿಸುತ್ತಿದೆ.

ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಜೊತೆಗೆ, ಕಮಲ್ ಹಾಸನ್, ದಿಶಾ ಪಟಾನಿ, ಶಾಶ್ವತ್ ಚಟರ್ಜಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಸಿನಿಮಾ, ಕಲೆಕ್ಷನ್‌ ವಿಚಾರದಲ್ಲಿಯೂ ದಾಖಲೆ ಬರೆದಿತ್ತು.

ಮೃಣಾಲ್ ಠಾಕೂರ್, ವಿಜಯ್ ದೇವರಕೊಂಡ, ದುಲ್ಕರ್ ಸಲ್ಮಾನ್, ರಾಮ್ ಗೋಪಾಲ್ ವರ್ಮಾ ಮತ್ತು ಎಸ್ಎಸ್ ರಾಜಮೌಳಿಯಂತಹ ಕಲಾವಿದರು ಈ ಸಿನಿಮಾದಲ್ಲಿದ್ದರು. ಈ ಬಹುತಾರಾಗಣದ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಬರೋಬ್ಬರಿ 1200 ಕೋಟಿ ಬಾಚಿಕೊಂಡಿತ್ತು.

ಈಗ ಇದೇ ಸಿನಿಮಾ ಜೀ ಕನ್ನಡದಲ್ಲಿ ಇನ್ನೇ...