ಭಾರತ, ಮೇ 5 -- ಬೆಂಗಳೂರು: ಕನ್ನಡದ ಖ್ಯಾತ ನಟ ಮತ್ತು ನಿರ್ದೇಶಕ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡಿದ್ದು ಉಪೇಂದ್ರ ಅವರು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಆಸಿಡಿಟಿ ಹೆಚ್ಚಾದ ಬಳಿಕ ನಟ ಅಸ್ವಸ್ಥರಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲವೆಂದು ಮೂಲಗಳು ತಿಳಿಸಿವೆ.
ಮೇ 5ರ ಅಪರಾಹ್ನ ಇವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೊಟ್ಟೆಯುರಿಯಿಂದ ಬಳಲುತ್ತಿದ್ದ ಇವರು ತಕ್ಷಣ ಪ್ರಾಥಮಿಕ ಚಿಕಿತ್ಸೆ ತೆಗೆದುಕೊಂಡಿದ್ದಾರೆ. ಸಾಕಷ್ಟು ಸಮಯವಾದರೂ ನೋವು ಶಮನವಾಗದ ಕಾರಣ ಮನೆಯ ಹತ್ತಿರವಿರುವ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಅಪರಾಹ್ನ 3 ಗಂಟೆಯ ಆಸುಪಾಸಿನಲ್ಲಿ ಇವರು ಆಸ್ಪತ್ರೆಗೆ ದಾಖಲಾಗಿದ್ದರು.
ಸ್ಪರ್ಶ್ ಆಸ್ಪತ್ರೆಯ ವೈದ್ಯರು ನಟನನ್ನು ಅಮೂಲಾಗ್ರವಾಗಿ ಪರೀಕ್ಷೆ ನಡೆಸಿದ್ದಾರೆ. ಹೈಪರ್ ಅಸಿಡಿಟಿಯಿಂದ ಈ ತೊಂದರೆ ಕಾಣಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಆಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.