ಭಾರತ, ಏಪ್ರಿಲ್ 17 -- ಸ್ಯಾಂಡಲ್‌ವುಡ್‌ ಮಾತ್ರವಲ್ಲದೆ, ಪಕ್ಕದ ಟಾಲಿವುಡ್‌ನಲ್ಲಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ ದಿಯಾ, ಬ್ಲಿಂಕ್‌ ಸಿನಿಮಾ ಖ್ಯಾತಿಯ ನಟ ದೀಕ್ಷಿತ್‌ ಶೆಟ್ಟಿ. ಇದೀಗ ಇದೇ ದೀಕ್ಷಿತ್‌ ತಮ್ಮ ಮುಂದಿನ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿರುವ ʻಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಸಿನಿಮಾದ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮೊದಲ ಹಾಡು ಎಂಆರ್‌ಟಿ ಮ್ಯೂಸಿಕ್‌ ಮೂಲಕ ಬಿಡುಗಡೆ ಆಗಿದೆ.

ಈಗಾಗಲೇ ʻರಂಗಿತರಂಗʼ, ʻಅವನೇ ಶ್ರೀಮನ್ನಾರಾಯಣʼ ಸೇರಿ ಒಂದು ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಹೆಚ್.ಕೆ ಪ್ರಕಾಶ್ ʻಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಸಿನಿಮಾ ನಿರ್ಮಾಣ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ ಈ ಚಿತ್ರದಲ್ಲಿ ನಾಯಕರಾಗಿ ನಟಿಸಿದರೆ, ʻಪ್ರೇಮ ಪೂಜ್ಯಂʼ, ʻಕೌಸಲ್ಯ ಸುಪ್ರಜಾ ರಾಮʼ ಖ್ಯಾತಿಯ ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಅಭಿಷೇಕ್ ಎಂ ನಿರ್ದೇಶನ ಮಾಡಿದ್ದಾರೆ. ಇದೀಗ ಇದೇ ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ.

ಇದನ್ನೂ ಓದಿ: ಈ ಪುಟ್ಟ ಪೋರ ಈಗ ಕನ್ನಡ ಕ...