ಭಾರತ, ಮಾರ್ಚ್ 4 -- ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಮೊದಲ ಸೆಮಿಫೈನಲ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಮಂಗಳವಾರ (ಮಾ 4) ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಈ ಮಹತ್ವದ ಪಂದ್ಯದಲ್ಲಿ ಭಾರತ ತಂಡವು ತೋಳಿಗೆ ಕಪ್ಪು ಪಟ್ಟಿ ಧರಿಸಿ ಆಡುತ್ತಿದೆ. ಆದರೆ ಕ್ರಿಕೆಟ್ ಅಭಿಮಾನಿಗಳಿಗೆ ಭಾರತೀಯ ಆಟಗಾರರು ಕಪ್ಪು ಪಟ್ಟಿ ಧರಿಸಿದ್ದೇಕೆ ಎಂಬ ಪ್ರಶ್ನೆ ಕಾಡುತ್ತಿದೆ. ಇದಕ್ಕೆ ದುಃಖಕರ ಕಾರಣ ಇದೆ.

ಮಾರ್ಚ್​ 3ರಂದು ನಿಧನರಾದ ಮುಂಬೈನ ಲೆಜೆಂಡರಿ ಸ್ಪಿನ್ನರ್ ಪದ್ಮಾಕರ್ ಶಿವಲ್ಕರ್ ಅವರಿಗೆ ಗೌರವ ಸಲ್ಲಿಸಲು ಭಾರತೀಯ ಆಟಗಾರರು ಕಪ್ಪು ಪಟ್ಟಿ ಧರಿಸಿದ್ದರು. ಶಿವಲ್ಕರ್ ವಯೋಸಹಜ ಸಮಸ್ಯೆಗಳಿಂದಾಗಿ ತಮ್ಮ 84ನೇ ವಯಸ್ಸಿನಲ್ಲಿ ನಿಧನರಾದರು. ಎಡಗೈ ಸ್ಪಿನ್ನರ್ ಆಗಿರುವ ಶಿವಲ್ಕರ್ ತಮ್ಮ 22ನೇ ವಯಸ್ಸಿನಲ್ಲಿ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ್ದರು. 1961-62 ಮತ್ತು 1987-88ರ ನಡುವೆ ಮುಂಬೈ ಪರ 124 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ...