Bengaluru, ಏಪ್ರಿಲ್ 19 -- ಥಗ್‌ ಲೈಫ್‌ ಚಿತ್ರದ ಜಿಂಗುಚ್ಚಾ ಹಾಡು ಬಿಡುಗಡೆ ಆಗಿದ್ದು, ಹಾಡಿನಲ್ಲಿ ಕಮಲ್ ಹಾಸನ್‌, ಸಿಂಬು ಕಾಣಿಸಿಕೊಂಡಿದ್ದಾರೆ. ಈ ಹಾಡನ್ನು ಮದುವೆ ಸಮಾರಂಭದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ.

ವಿಶೇಷ ಅಂದರೆ ಈ ಹಾಡಿಗೆ ಸ್ವತಃ ಕಮಲ್‌ ಹಾಸನ್‌ ಸಾಹಿತ್ಯ ಒದಗಿಸಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ಎಲ್ಲರನ್ನೂ ಹಿಡಿದಿಟ್ಟುಕೊಳ್ಳುವಂತೆ ಮಾಡಿದೆ‌.

ಚೆನ್ನೈನಲ್ಲಿ ನಡೆದ ಪ್ಯಾ‌ನ್ ಇಂಡಿಯಾದ ಪ್ರೆಸ್ ಮೀಟ್ ವೇದಿಕೆಯಲ್ಲಿ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್, ಆರ್. ಮಹೇಂದ್ರನ್, ಮದ್ರಾಸ್ ಟಾಕೀಸ್ ಮತ್ತು ಶಿವ ಅನಂತ್ ನಿರ್ಮಾಣದಲ್ಲಿ ಥಗ್‌ ಲೈಫ್‌ ಸಿನಿಮಾ ತಯಾರಾಗಿದೆ.

ಚಿತ್ರದ ತಾರಾಗಣದಲ್ಲಿ ಕಮಲ್ ಹಾಸನ್, ಸಿಲಂಬರಸನ್ ಟಿಆರ್, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ ಮತ್ತು ನಾಸರ್ ಮತ್ತಿತರು ನಟಿಸಿದ್ದಾರೆ. ಈ ಬಹು ನಿರೀಕ್ಷಿತ ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ನೀಡಿದ್ದಾರೆ.

ಈ ಚಿತ್ರದ ಕತೆ, ಚಿತ್ರಕ...