ಭಾರತ, ಫೆಬ್ರವರಿ 26 -- Karnataka Weather Feb 26: ಕರ್ನಾಟಕದ ಉದ್ದಗಲಕ್ಕೂ ಬೇಸಿಗೆ ಅನುಭವ ಹೆಚ್ಚಾಗತೊಡಗಿದೆ. ಕರಾವಳಿ ಕರ್ನಾಟಕದಲ್ಲಿ ನಿನ್ನೆಯಿಂದ ಉಷ್ಣದ ಅಲೆ ಶುರುವಾಗಿದ್ದು ನಾಳೆಯೂ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉಷ್ಣದ ಅಲೆ (ಹೀಟ್‌ ವೇವ್‌) ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ನಿನ್ನೆ (ಫೆ 25) ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಶಿಯಸ್ ದಾಟಿದ್ದು, ಅನೇಕರ ಆರೋಗ್ಯದಲ್ಲಿ ಏರುಪೇರಾಗಿರುವುದು ಕಂಡುಬಂದಿದೆ.

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ಫೆ. 25ರ ಅಪರಾಹ್ನ ಬಿಡುಗಡೆ ಮಾಡಿದ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಮುಂದಿನ 3 ದಿನಗಳವರೆಗೆ (ಫೆ 27) ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹೆಚ್ಚು.

ಉತ್ತರ ಅಲೆಯ ಸೂಚ್ಯಂಕದ ಪ್ರಕಾರ, ಕರಾವಳಿ ಕರ್ನಾಟಕದ ಮೇಲೆ ಸಾಪೇಕ್ಷ...