ಭಾರತ, ಫೆಬ್ರವರಿ 12 -- ಬೆಂಗಳೂರು: ಕರ್ನಾಟಕದ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ ಪ್ರಕಾರ, ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಇ-ಕಾರ್ಮಿಕ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಆಯುಕ್ತರು ಸೂಚಿಸಿರುವುದಾಗಿ ಕರ್ನಾಟಕ ವಾರ್ತಾ ಇಲಾಖೆ ತಿಳಿಸಿದೆ.

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ರ ಪ್ರಕಾರ, ಕರ್ನಾಟಕದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳು ಇ ಕಾರ್ಮಿಕ ನೋಂದಣಿ ಮಾಡಿಸಿಕೊಳ್ಳಬೇಕಾದ್ದು ಕಡ್ಡಾಯ. ಇದಕ್ಕೆ ಸಂಬಂಧಿಸಿದ ಅಧಿಸೂಚನೆಯು 2025ರ ಜನವರಿ 1 ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ. ಇದು ಈ ಹಿಂದೆ ಹೊರಡಿಸಲಾದ ಎಲ್ಲಾ ಅಧಿಸೂಚನೆಗಳ ಮುಂದುವರೆದ ಭಾಗವಾಗಿದ್ದು, ಅಧಿನಿಯಮದ ಉಪಬಂಧಗಳು ಈಗಾಗಲೇ ಜಾರಿಗೆ ಬಂದಿರುವ ಸ್ಥಳಗಳನ್ನು ಒಳಗೊಂಡಂತೆ ಈ ಅಧಿಸೂಚನೆಯು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ಮೂರು ತಿಂಗಳ ನಂತರದ ದಿನಾಂಕದಿಂದ 2025 ಏಪ್ರಿಲ್ 1 ...