ಭಾರತ, ಮೇ 14 -- ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು ಎಂದಿದ್ದಾರೆ.

ಎಲ್ಲಾ ಅರ್ಹ ನಾಗರಿಕರು ಮತ್ತು ಅನಧಿಕೃತ ನಿರ್ಮಾಣಗಳನ್ನು ಹೊಂದಿರುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಿ-ಖಾತಾ ವಿತರಣೆಗೆ ಒಂದು ಬಾರಿ...