ಭಾರತ, ಏಪ್ರಿಲ್ 20 -- ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವ ಮುನ್ನ ಜನಿವಾರ ತೆಗೆಯುವಂತೆ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಬೀದರ್‌ನ ಸಾಯಿ ಸ್ಪೂರ್ತಿ ಕಾಲೇಜಿನ ಪರೀಕ್ಷಾ ಕೇಂದ್ರದ ಸ್ಕ್ರೀನಿಂಗ್ ಕಮಿಟಿಯು, ಪರೀಕ್ಷಾ ಕೊಠಡಿಗೆ ಪ್ರವೇಶಿಸಲು ಬಿಡದೆ ಜನಿವಾರವನ್ನು ತೆಗೆದುಹಾಕುವಂತೆ ವಿದ್ಯಾರ್ಥಿಗೆ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣ ಸಂಬಂಧ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಹಲವು ಬೆಳವಣಿಗೆಗಳು ನಡೆದಿವೆ.

ಜನಿವಾರ ಪ್ರಕರಣವು ಇದೀಗ ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗಿನ ಪ್ರಮುಖ 10 ಬೆಳವಣಿಗೆಗಳನ್ನು ನೋಡೋಣ.

ಇದನ್ನೂ ಓದಿ | ನೀಟ್‌ ಪರೀಕ್ಷೆ2025 ಮೇ 4 ರಂದು ಭಾನುವಾರ ನಿಗದಿ; ಕರ್ನಾಟಕದ ಅಭ್ಯರ್ಥಿಗಳು ಈ ಸೂಚನೆಗಳನ್ನು ಗಮನಿಸಿ

Published by HT Digital Content Services with permission from HT Kannada....