Bangalore, ಮಾರ್ಚ್ 14 -- ಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂವರು ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಗೆ ತಿಳಿಸಿದರು. ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರ ಗಮನ ಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪರವಾಗಿ ಶುಕ್ರವಾರ ಉತ್ತರಿಸಿದ ಸಚಿವರು, ತನಿಖಾ ತಂಡವು ತುಮಕೂರಿಗೆ ಭೇಟಿ ನೀಡಿ 571 ಕಾಮಗಾರಿಗಳನ್ನು ಆಯ್ಕೆ ಮಾಡಿ, 183 ಕಾಮಗಾರಿಗಳ ಕಡತಗಳನ್ನು ಪರಿಶೀಲಿಸಿದೆ. 25 ಅನರ್ಹ ಗುತ್ತಿಗೆದಾರರಿಗೆ 69 ಕಾಮಗಾರಿಗಳ ಟೆಂಡ‌ರ್ ನೀಡಿ, ಕಾರ್ಯಪಾಲಕ ಇಂಜಿನಿಯರ್ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಮಧ್ಯಂತರ ವರದಿ ನೀಡಿದೆ ಎಂದು ಹೇಳಿದರು.

ಕರ್ತವ್ಯಲೋಪ ಎಸಗಿದ ಕಾರ್ಯಪಾಲಕ ಇಂಜಿನಿಯರ್ (ನಿವೃತ್ತ) ಎಸ್. ರವೀಶ್ ಅವರ ವಿರುದ್ಧ ಇಲಾಖಾ ವಿಚಾರಣೆ ಕೈಗೊಳ್ಳಲು ಮತ್ತು...