ಭಾರತ, ಮಾರ್ಚ್ 1 -- ಬೆಂಗಳೂರು : ರಾಜ್ಯದಲ್ಲಿ ಭಾಷೆಯ ವಿಚಾರ ಚರ್ಚೆಯ ವಿಷಯವಾಗಿರುವ ಮಧ್ಯೆ, ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಉತ್ಪಾದನೆ ಮತ್ತು ಮಾರಾಟವಾಗುವ ಎಲ್ಲಾ ಉತ್ಪನ್ನಗಳಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಭಾಷೆಯನ್ನು ಸೇರಿಸಲು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ನಲ್ಲಿ ಉತ್ಪನ್ನದ ಹೆಸರು, ಬಳಕೆ ನಿರ್ದೇಶನ ಸೇರಿದಂತೆ ಎಲ್ಲವೂ ಬೇರೆ ಭಾಷೆಯ ಜೊತೆಗೆ ಕನ್ನಡದಲ್ಲಿಯೂ ಇರಬೇಕೆಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ಉತ್ಪನ್ನಗಳಲ್ಲಿ ಇತರ ಭಾಷೆಗಳೊಂದಿಗೆ ಕನ್ನಡದ ಬಳಕೆ ಕಡ್ಡಾಯ. ರಾಜ್ಯ ಸರ್ಕಾರವು ಈ ನಿಯಮದ ಕಟ್ಟುನಿಟ್ಟಿನ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಈ ನಿರ್ದೇಶನವು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲ...