Bengaluru, ಏಪ್ರಿಲ್ 25 -- ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಒದಗಿಸುವುದಕ್ಕಾಗಿ ಮೇ 5 ರಿಂದ ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ-2025 ನಡೆಯಲಿದೆ. ಈ ಸಮೀಕ್ಷೆ ಮೂರು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಗಣತಿ ನಡೆಯಲಿದೆ. ಈ ಗಣತಿಯ ಮೂಲಕ ಉಪಜಾತಿಗಳು, ಅವುಗಳ ಜನಸಂಖ್ಯೆ, ಆರ್ಥಿಕ ಸ್ಥಿತಿಗತಿ, ಉದ್ಯೋಗ, ಭೂಮಾಲೀಕತ್ವ ಇತ್ಯಾದಿ ಮಾಹಿತಿಗಳನ್ನೂ ಕಲೆಹಾಕಲಾಗುತ್ತದೆ. ಎಲ್ಲ ದತ್ತಾಂಶಗಳನ್ನು ಸಂಗ್ರಹಿಸಿದ ಬಳಿಕ ವಿಶ್ಲೇಷಣೆ ಮಾಡಿ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳಮೀಸಲು ಒದಗಿಸುವುದಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದಲ್ಲಿ ಅನೇಕ ಉಪಜಾತಿಗಳಿದ್ದು ಅವುಗಳ ಜನಸಂಖ್ಯೆ ಮತ್ತು ಇತರೆ ಪೂರಕ ಮಾಹಿತಿಗಳನ್ನು ಕಲೆಹಾಕುವ ಕೆಲಸ ಮೇ ಮೊದಲ ವಾರದಿಂದ ಶುರುವಾಗಲಿದೆ. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವುದಕ್ಕಾಗಿ ಮೇ 5 ರಿಂದ ಗಣತಿಯನ್ನು ನಡೆಸಲಾಗುತ್ತದೆ. ಇದಕ್ಕೆ 'ಪರಿಶಿಷ್ಟ ಜಾತಿ, ಉಪ ಜಾತಿ ...