Bangalore, ಮೇ 14 -- ಬೆಂಗಳೂರು: ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆಗೆ ಅನಾಹುತಗಳೂ ಆಗಿವೆ. ಹತ್ತಕ್ಕೂ ಹೆಚ್ಚು ಮಂದಿ ಕರ್ನಾಟಕದ ನಾನಾ ಕಡೆಗಳಿಗೆ ಸಿಡಿಲಿನಿಂದ ಜೀವ ಕಳೆದುಕೊಂಡಿದ್ದಾರೆ. ಒಂದೇ ಕುಟುಂಬದ ಮೂವರು ಸಿಡಿಲಿನಿಂದಾಗಿ ಮೃತಪಟ್ಟಿದ್ದಾರೆ. ಅಲ್ಲದೇ ಭಾರೀ ಮಳೆದಿಂದ ಗದಗ ಜಿಲ್ಲೆಯ ಬೆನಕೊಪ್ಪ, ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಿಂದ ನೀರು ಉಕ್ಕಿ ಹರಿದು ಕೊಚ್ಚಿಕೊಂಡು ಹೋಗಿದ್ದಾರೆ. ಬೆಂಗಳೂರು ನಗರದಲ್ಲೂ ಎಡಬಿಡದೇ ಸುರಿದ ಭಾರೀ ಮಳೆಯಿಂದ ನೀರು ರಸ್ತೆಯಲ್ಲಿಯೇ ಹರಿದು ಜನ ತೊಂದರೆ ಅನುಭವಿಸಿದ್ದಾರೆ. ಮೈಸೂರು ಹಾಗೂ ಸುತ್ತಮುತ್ತಲಿನ ಭಾಗದಲ್ಲೂ ಭಾರೀ ಮಳೆ ಸುರಿದಿದೆ. ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಬಳ್ಳಾರಿಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿದ್ಧಾರೆ. ಬೀರಪ್ಪ (45), ಸುನೀಲ (26) ಕುರಿ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.