Bangalore, ಜನವರಿ 29 -- ಬೆಂಗಳೂರು: ಈಗ ಎಲ್ಲೆಡೆ ಸೈಬರ್‌ ಅಪರಾಧ, ಡಿಜಿಟಲ್‌ ದುರುಪಯೋಗದ್ದೇ ಸದ್ದು. ಅದರಲ್ಲೂ ಜನರನ್ನು ವಂಚಿಸಿ ಹಣ ದೋಚುವ, ದಾಖಲೆಗಳನ್ನು ತಿದ್ದಿ ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ಕಾರಣದಿಂದಲೇ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಈಗಾಗಲೇ 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣ ಮಾಡಿದೆ. ಭೂ ಸುರಕ್ಷಾ ಯೋಜನೆ ಮೂಲಕ ಭೂ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆಯನ್ನು ಒದಗಿಸಿದೆ. ಎಲ್ಲಾ 31 ಜಿಲ್ಲೆಗಳಲ್ಲಿ ದಾಖಲೆಗಳ ಕಂಪ್ಯೂಟರೀಕರಣ ಕಾರ್ಯ ನಡೆಯುತ್ತಿದೆ. ತಂತ್ರಾಂಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕಂದಾಯ ವ್ಯವಸ್ಥೆಯಲ್ಲಿ ಸುಧಾರಣಾ ಕಾರ್ಯ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಂತ್ರಜ್ಞಾನ ಆಧರಿತ ಸುಧಾರಣಾ ಕ್ರಮಗಳ ವಿವರ ನೀಡಿದರು. ಇದಕ್...