Bangalore, ಏಪ್ರಿಲ್ 22 -- ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಆಗುವ ಸಾಧ್ಯತೆಗಳಿವೆ. ಈ ಕುರಿತು ಕೂಡ್ಲಿಗಿ ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ‌ ಶಿಫಾರಸ್ಸುಗಳನ್ನು ಸಲ್ಲಿಸಿತು. ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ. ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿಲ್ಲ. ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್. ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ...