ಭಾರತ, ಮೇ 26 -- ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಿಸಿಲಿನ ತಾಪದಿಂದ ಕಂಗೆಟ್ಟ ಜನರಿಗೆ ಮಳೆಯ ಸಿಂಚನ ಖುಷಿ ನೀಡಿತ್ತು. ಇದೀಗ ಚಂಡ ಮಾರುತ, ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಪ್ರವೇಶಕ್ಕೂ ಮುನ್ನ ಮಳೆ ಜೋರಾಗಿದೆ. ಕೆಲವಡೆ ಮಳೆ ಅತಿವೃಷ್ಟಿಯನ್ನೂ ಸೃಷ್ಟಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದಾಗಿ ಕೆಲವಡೆ ಅನಾಹುತಗಳು ಸೃಷ್ಟಿಯಾಗಿವೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಮಳೆಯ ಜೊತೆ ಜೋರಾದ ಗಾಳಿಯೂ ಬೀಸುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಇಂದು (ಮೇ 26) ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದ್ದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಬರುತ್ತೆ, ಬೆಂಗಳೂರಲ್ಲಿ ಮಳೆ ಇದ್ಯಾ ಎಂಬಿತ್ಯಾದಿ ಹವಾಮಾನ ವರದಿ ಇಲ್ಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದೆ. ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ...
Click here to read full article from source
To read the full article or to get the complete feed from this publication, please
Contact Us.