Mysuru, ಜೂನ್ 4 -- ಮೈಸೂರು: ಭಾರತದಲ್ಲೇ ಅತಿ ಹೆಚ್ಚು ಶ್ರೀಗಂಧ ಬೆಳೆಯುವ, ಶ್ರೀಗಂಧದ ನಾಡು ಎಂದೇ ಹೆಸರಾಗಿರುವ ಕರ್ನಾಟಕದಲ್ಲಿ ಶ್ರೀಗಂಧ ಬೆಳೆಗೆ ಇನ್ನಷ್ಟು ಪ್ರೋತ್ಸಾಹ ನೀಡಲು ಅರಣ್ಯ ಇಲಾಖೆಯು ನೀತಿ ಸರಳೀಕರಣಗೊಳಿಸಲು ಮುಂದಾಗಿದೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ಶ್ರೀಗಂಧದ ಎಣ್ಣೆಯ ಅಗತ್ಯ ಪ್ರತಿಪಾದಿಸಿದ್ದಾರೆ. ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯುತ್ತಿದ್ದಾರೆ. ಇವರಿಗೆ ಶ್ರೀಗಂಧ ಕಟಾವು ಮಾಡಲು, ಸಾಗಾಟ ಮಾಡಲು ಅನುವಾಗುವಂತೆ ಶೀಘ್ರವೇ ಶ್ರೀಗಂಧದ ನೀತಿ ಸರಳೀಕರಣ ಮಾಡಿ ಅಧಿಸೂಚನೆ ಹೊರಡಿಸಲಾಗುವುದು. ಅರಣ್ಯ ಇಲಾಖೆಯ ವತಿಯಿಂದ ನೆಡುತೋಪಿನಲ್ಲಿ ಶ್ರೀಗಂಧದ ಮರ ಬೆಳೆಸಲು ಕ್ರಮ ವಹಿಸಲು ಕೂಡ ಕ್ರಮ ವಹಿಸಲಾಗುತ್ತಿದೆ.

ಕೈಗಾರಿಕೆ ಇಲಾಖೆ ವ್ಯಾಪ್ತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ಸಾಂಸ್ಥಿಕ ಜವಾಬ್ದಾರಿ ನೆರವಿನಿಂದ ಮೈಸೂರು ವಿಭಾಗದ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ...