ಭಾರತ, ಮಾರ್ಚ್ 4 -- ಬೆಂಗಳೂರು: ಕೆಲವು ದಿನಗಳ ಹಿಂದೆಯೇ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡುತ್ತಿದ್ದಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಕರ್ನಾಟಕಕ್ಕೂ ಎಂಟ್ರಿ ಕೊಟ್ಟಿರುವ ಹಕ್ಕಿ ಜ್ವರ, ಹಲವು ಜಿಲ್ಲೆಗಳ ಜನರನ್ನು ಕಾಡುತ್ತಿದೆ. ಹೀಗಾಗಿ ಆಂಧ್ರ ಹಾಗೂ ತೆಲಂಗಾಣ ಗಡಿ ಜಿಲ್ಲೆಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ಜೊತೆಗೆ ಕೇರಳದ ಜೊತೆಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕು, ಚಿಕ್ಕಬಳ್ಳಾಪುರ ತಾಲ್ಲೂಕು ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕುಗಳಲ್ಲಿ ಕೋಳಿಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿವೆ. ಹಕ್ಕಿ ಜ್ವರದಿಂದ ಬಳ್ಳಾರಿಯಲ್ಲಿ ಭಾರಿ ತೊಂದರೆ ಉಂಟಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಸುಮಾರು 17 ಸಾವಿರ ಕೋಳಿಗಳು ಸಾವನ್ನಪ್ಪಿವೆ. ಬೇರೆ ದಾರಿ ಇಲ್ಲದೆ ಜಿಲ್ಲಾಡಳಿತವೇ 7 ಸಾವಿರ ಜೀವಂತ ಕೋಳಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿದೆ.

ಬ...