Bangalore, ಜುಲೈ 18 -- ಬೆಂಗಳೂರು:ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಂಡಿರುವ 'ಮನೆ-ಮನೆಗೆ ಪೊಲೀಸ್' ವಿನೂತನ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬೆಂಗಳೂರಿನ ಗೋವಿಂದರಾಜನಗರದಲ್ಲಿ ಚಾಲನೆ ನೀಡಿದರು.ಪೊಲೀಸ್ ಇಲಾಖೆ ಹೊರತಂದಿರುವ 'ಮನೆ ಮನೆಗೆ ಪೊಲೀಸ್' ಕೈಪಿಡಿಯನ್ನು ಬಿಡುಗಡೆ ಮಾಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.ದೇಶದಲ್ಲಿ ಪ್ರಥಮ ಬಾರಿಗೆ ಮನೆ ಮನೆಗೆ ಪೊಲೀಸ್ ವಿನೂತನ ಕಾರ್ಯಕ್ರಮ ಮಾಡಲಾಗುತ್ತಿದೆ. ಬೇರೆ ಯಾವ ರಾಜ್ಯದಲ್ಲಿಯೂ ಸಹ ಇಂತಹ ಕಾರ್ಯಕ್ರಮ ಮಾಡಿಲ್ಲ. ಇದರ ಯಶಸ್ವಿ ದೇಶವ್ಯಾಪ್ತಿ ಆಗುತ್ತದೆ ಎಂದು ಹೇಳಿದರು.

ನಮ್ಮ ಪೊಲೀಸರು ಜನಸ್ನೇಹಿಯಾಗಬೇಕು. ಸಹೋದರತ್ವದ ಭಾವನೆಯಿಂದ ಪೊಲೀಸರನ್ನು ನೋಡಬೇಕು. ಈ ನಿಟ್ಟಿನಲ್ಲಿ ನಾವೇ ಜನರ ಮನೆ ಬಾಗಿಲಿಗೆ ಹೋಗೋಣ. ಅವರ ಕಷ್ಟಗಳನ್ನು ಆಲಿಸಿ, ಪರಿಹರಿಸಿದರೆ ಒಳ್ಳೆಯ ಅಭಿಪ್ರಾಯ ಮೂಡುತ್ತದೆ ಎಂದರು.

ನಮ್ಮ ಪೊಲೀಸರು ದಿನನಿತ್ಯ ಬೀಟ್ ಹೋಗುತ್ತಾರೆ. ಯಾವ ಮನೆಗೆ ಯಾರು ಬಂದಿದ್ದಾರೆ, ಏನು ಕೆಲಸ ಮಾಡುತ್ತಾರೆ, ಯಾವ ...