ಭಾರತ, ಏಪ್ರಿಲ್ 15 -- ಡೀಸೆಲ್ ಬೆಲೆ ಏರಿಕೆ ಹಿಂಪಡೆಯುವುದು ಮತ್ತು ಇತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ ಆರಂಭವಾಗಿದೆ. ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘದ ನೇತೃತ್ವದಲ್ಲಿ ಈ ಮುಷ್ಕರ ನಡೆಯುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ತೈಲಗಳ ಬೆಲೆ ಏರಿಕೆ ರಾಜ್ಯದಲ್ಲಿ ಸಂಕಷ್ಟ ತಂದಿದೆ. ಡೀಸೆಲ್ ಬೆಲೆ ಏರಿಕೆಯಾಗಿರುವುದು ಸರಕು ಸಾಗಾಣಿಕೆ ಮೇಲೆ ಪರಿಣಾಮ ಬೀರಿದೆ.

ಡೀಸೆಲ್ ಬೆಲೆ ಏರಿಕೆ ಹಿಂಪಡೆಯಬೇಕು ಮತ್ತು ಟೋಲ್ ಶುಲ್ಕವನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆಯನ್ನಿಟ್ಟು ಲಾರಿ ಮುಷ್ಕರ ಆರಂಭಿಸಲಾಗಿದೆ. ಮುಷ್ಕರದ ಬಗ್ಗೆ ಮಾತನಾಡಿರುವ ಎಫ್‌ಕೆಎಸ್‌ಎಲ್‌ಒಎ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ, ಸುಮಾರು ಆರು ಲಕ್ಷ ಟ್ರಕ್‌ಗಳು ಮುಷ್ಕರಕ್ಕೆ ಬೆಂಬಲ ಕೊಟ್ಟಿವೆ ಎಂದು ಹೇಳಿದ್ದಾರೆ. ಡೀಸೆಲ್ ದರ ಇಳಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಲಾರಿ ಮಾಲೀಕರು ಏ.14ರವರೆಗೆ ಗಡುವು ನೀಡಿದ್ದರ...