ಭಾರತ, ಮೇ 10 -- ಕರ್ನಾಟಕದ ಖ್ಯಾತ ಕೃಷಿ ವಿಜ್ಞಾನಿ ಮತ್ತು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ಪ್ರಧಾನ ನಿರ್ದೇಶಕರಾಗಿದ್ದ ಎಸ್. ಅಯ್ಯಪ್ಪನ್ (ಸುಬ್ಬಣ್ಣ ಅಯ್ಯಪ್ಪನ್) ನಿಗೂಢವಾಗಿ ಮೃತಪಟ್ಟಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಇವರ ನಿಧನದ ಕುರಿತು ಅನೇಕ ಸುದ್ದಿಗಳು ಹರಿದಾಡುತ್ತಿವೆ. ಇದು ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ. "ಶ್ರೀರಂಗಪಟ್ಟಣ ಕಾವೇರಿ ನದಿಯಲ್ಲಿ ಅವರ ಮೃತದೇಹ ಸಿಕ್ಕಿದೆ. ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಬೆಂಗಳೂರು ವಿದ್ಯಾರಣ್ಯಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು" ಎಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟನೆ ನೀಡಿದ್ದಾರೆ.
ಭಾರತೀಯ ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಗೆ, ವಿಶೇಷವಾಗಿ ಮೀನುಗಾರಿಕೆ ಮತ್ತು ಜಲಚರ ಸಾಕಣೆ ವಿಭಾಗದಲ್ಲಿ ಇವರು ಸಾಕಷ್ಟು ಕೆಲಸ ಮಾಡಿದ್ದರು. ಇವರು 2010ರ ಜನವರಿಯಿಂದ 2016ರ ಫೆಬ್ರವರಿಯವರೆಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ಮಹಾನಿರ್ದೇಶಕರಾಗಿದ್ದರು ಮತ್ತು ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆಯ (ಡಿ...
Click here to read full article from source
To read the full article or to get the complete feed from this publication, please
Contact Us.