ಭಾರತ, ಮಾರ್ಚ್ 15 -- ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಥಳೀಯಾಡಳಿತ ಸಂಸ್ಥೆ ಬಿಬಿಎಂಪಿ ಸೇರಿ ರಾಜ್ಯದ ನಗರಗಳಲ್ಲಿ ಅನಧಿಕೃತ ಆಸ್ತಿಗಳಿಗೆ ಬಿ ಖಾತಾ ಹಂಚಿಕೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಹೀಗೆ, ಕರ್ನಾಟಕದ ನಗರ ಪ್ರದೇಶಗಳಲ್ಲಿ ಜಾರಿಗೊಳಿಸಿದ ಮಾದರಿಯಲ್ಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಅನಧಿಕೃತ ಗ್ರಾಮೀಣ ಆಸ್ತಿಗಳಿಗೆ 'ಬಿ' ಖಾತಾ ಒದಗಿಸುವ ಮಹತ್ವದ ಮಸೂದೆಯನ್ನು ಕರ್ನಾಟಕ ಸಚಿವ ಸಂಪುಟ ಶುಕ್ರವಾರ ಅನುಮೋದಿಸಿದೆ. ಸಂಪನ್ಮೂಲ ಕ್ರೋಡೀಕರಣ ಹೆಚ್ಚಿಸುವ ದೃಷ್ಟಿಯಿಂದ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಳ್ಳತೊಡಗಿದೆ. ಆ ಪೈಕಿ ಇದೂ ಒಂದು ಸರ್ಕಾರದ ಮೂಲಗಳು ತಿಳಿಸಿವೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆಗೆ ವಿಧಾನ ಮಂಡಲದಲ್ಲಿ ಅಂಗೀಕಾರ ಪಡೆದು ಕಾಯ್ದೆಯಾಗಿ ಜಾರಿಗೊಳಿಸುವ ಉದ್ದೇಶ ಕರ್ನಾಟಕ ಸರ್ಕಾರದ್ದು. ಆ ಮೂಲಕ ಖಾತಾಗಳನ್ನು ಹೊಂದಿರದ ಸುಮಾರು 95 ಲಕ್ಷಕ್ಕೂ ಗ್ರಾಮೀಣ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದರೆ ಸರ್ಕಾರದ ಸಂಪನ್ಮೂಲ ಹೆಚ್ಚಾಗಲಿದೆ ಎಂಬ ನ...