ಭಾರತ, ಮೇ 17 -- ಬೆಂಗಳೂರು: ಕರ್ನಾಟಕದಲ್ಲಿ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಒಟ್ಟು 12 ಜೀವ ವೈವಿಧ್ಯ ತಾಣಗಳನ್ನು ಗುರುತಿಸಲಾಗಿದೆ. ಆದರೆ ಈವರೆಗೆ ಕರ್ನಾಟಕ ಸರ್ಕಾರ ಈ ವಿಚಾರವಾಗಿ ಯಾವುದೇ ಅಧಿಸೂಚನೆ ಹೊರಡಿಸಿಲ್ಲ ಎಂದು ವೃಕ್ಷ ಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. ಈ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದಿರುವ ಅನಂತ ಹೆಗಡೆ, ಈ ಬಗ್ಗೆ ಗಮನಹರಿಸುವಂತೆ ಆಗ್ರಹಿಸಿದರು.
ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಒಟ್ಟು 12 ಜೀವ ವೈವಿಧ್ಯ ತಾಣ ಎಂದು ಘೋಷಿಸುವುದಕ್ಕೆ ಈ ಹಿಂದೆ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಸರ್ಕಾರ ಇನ್ನೂ ಮನಸ್ಸು ಮಾಡಿಲ್ಲ.ಈ 12 ಜೀವ ವೈವಿಧ್ಯ ತಾಣಗಳ ಪೈಕಿ ಪ್ರಮುಖವಾದವು ಆದಿನಾರಾಯಣ ಸ್ವಾಮಿ ಬೆಟ್ಟ, ಕೋಲಾರ ಅಂತರಗಂಗೆ ಬೆಟ್ಟ, ಸಾಗರ ಬರೂರು ಸೀತಾ ಅಶೋಕ ವನ, ಜೋಗ ಬಳಿಯ ಕತ್ತಲೆ ಕಾನು ಪ್ರಮುಖವಾದವು ಎಂದು ಅನಂತ ಹೆಗಡೆ ಅಶೀಸರ ತಿಳಿಸಿದ್ದಾರೆ.
ಅಲ್ಲದೇ, ಈ ಹಿಂದೆ ಜೀವ ವೈವಿಧ್ಯ ಮಂಡಳಿಯು ಮೀನುಗಾರಿಕೆ ಇಲಾಖೆ ನೆರವ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.