Bangalore, ಏಪ್ರಿಲ್ 30 -- ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಅಂಗವಾಗಿ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಮೆರವಣಿಗೆಯಲ್ಲಿ ಶಾಸಕ ದುರ್ಯೋಧನ ಐಹೊಳೆ ಅವರೇ ಟ್ರಾಕ್ಟರ್‌ ಚಲಾಯಿಸಿದರು.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ನಡೆದ ಅದ್ದೂರಿ ಬಸವಜಯಂತಿ ಶೋಭಾಯಾತ್ರೆ ಗಮನ ಸೆಳೆಯಿತು.

ಕೂಡಲಸಂಗಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ-ಬಾಗಲಕೋಟೆ ಹಾಗೂ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಹಾಗೂ ಅನುಭವ ಮಂಟಪ - ಬಸವಾದಿ ಶರಣರ ವೈಭವ 2025 ಕಾರ್ಯಕ್ರಮ ಉದ್ಘಾಟನೆ ಹಾಗೂ ಬಸವ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ದೆಹಲಿಯ ಸಂಸತ್‌ ಭವನದಲ್ಲಿ ಜರುಗಿದ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಶ...