ಭಾರತ, ಫೆಬ್ರವರಿ 11 -- ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕದ ಶೇಂಗಾ ಬೆಳೆಗಾರರಿಗೆ ಖುಷಿ ಸುದ್ದಿ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಸುವ ಅವಧಿ ವಿಸ್ತರಣೆ ಮಾಡಿದ್ದು, ಹೆಚ್ಚುವರಿ ಶೇಂಗಾ ಖರೀದಿಸುವುದಕ್ಕೂ ಸೂಚನೆ ನೀಡಿದೆ. ಕರ್ನಾಟಕದಲ್ಲಿ ಈ ಬಾರಿ ಅಧಿಕ ಪ್ರಮಾಣದಲ್ಲಿ ಶೇಂಗಾ (ನೆಲಗಡಲೆ) ಬೆಳೆದ ಹಿನ್ನೆಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ರೈತರಿಗೆ ನೆರವಾಗಿದ್ದ ಕೇಂದ್ರ ಸರ್ಕಾರ, ಈಗ ಮತ್ತೆ ಖರೀದಿ ಅವಧಿಯನ್ನು ಫೆ 15ರ ತನಕ ವಿಸ್ತರಿಸಿದ್ದು, ಶೇಂಗಾ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯ ಪ್ರಕಾರ ಕೇಂದ್ರ ಕೃಷಿ ಸಚಿವಾಲಯವು, ಕರ್ನಾಟಕದಲ್ಲಿ 2024-25ರ ರಾಬಿ ಋತುವಿನಲ್ಲಿ (ಹಿಂಗಾರು ಬೆಳೆ) ಬೆಳೆದ ಶೇಂಗಾವನ್ನು ಖರೀದಿಸುವುದಕ್ಕೆ 90 ದಿನಗಳ ಕಾಲವಕಾಶ ನೀಡಿ ಕರ್ನಾಟಕ ಸರ್ಕಾರಕ್ಕೆ ಅನುಮತಿ ನೀಡಿತ್ತು. ಆದರೆ, ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಇದ್ದ ಕಾರಣ, ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ ಧಾರವಾಡದ ಸಂಸದರೂ ಆಗಿ...