ಭಾರತ, ಏಪ್ರಿಲ್ 20 -- ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹಳೆಯ ಅಲ್ಯೂಮಿನಿಯಮ್ ಪಾತ್ರೆಗಳ ಬದಲಿಗೆ ಹೊಸ ಪಾತ್ರ ನೀಡುವುದಾಗಿ ಹೇಳಿದ್ದಾರೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿಯಲ್ಲಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಮ್ಮ ಸರ್ಕಾರದ ಬದ್ಧತೆಯನ್ನು ವ್ಯಕ್ತಪಡಿಸಿದರು.

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು. ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ. ಹೀಗಾಗಿ ಹಳೆಯ ಪಾತ್ರೆಗಳನ್ನ ಬದಲಾಯಿಸಲಾಗುವುದು ಎಂದು ಹೇಳಿದರು...