Bangalore, ಫೆಬ್ರವರಿ 28 -- ಬೆಂಗಳೂರು: ಕರ್ನಾಟಕದಲ್ಲಿ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ಇತರ ಉದ್ದೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನವನ್ನು ಈಡೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿದೆ. ಸ್ಥಳೀಯವಾಗಿ ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಬಹುದೇ ಹೊರತು ಲೋಡ್ ಶೆಡ್ಡಿಂಗ್ ಮಾಡುವ ಸಂದರ್ಭ ಉದ್ಭವವಾಗುವುದಿಲ್ಲ.ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ ಎಂದರೆ, ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುಂದುವರಿಯುತ್ತಿದೆ. ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಅರ್ಥ..

ಇದು ಕರ್ನಾಟಕದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ನೀಡುವ ವಿವರಣೆ.

ಬೇಸಿಗೆಯಲ್ಲಿ ವಿದ್ಯುತ್...