ಭಾರತ, ಮೇ 4 -- ಬೆಂಗಳೂರು: ವೈದ್ಯಕೀಯ ಶಿಕ್ಷಣ ಕೋರ್ಸ್‌ಗಳಿಗೆ ಹೋಗಬಯಸುವ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ಮಟ್ಟದಲ್ಲಿ ನಡೆಯುವ ರಾಷ್ಟ್ರೀಯ ಪ್ರವೇಶ ಪರೀಕ್ಷೆ ನೀಟ್‌ 2025 ಮೇ 4ರ ಭಾನುವಾರ ನಡೆಯಲಿದೆ. ಕರ್ನಾಟಕದಲ್ಲೂ 381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಕರ್ನಾಟಕ ರಾಜ್ಯದ 1.49 ಲಕ್ಷ ವಿದ್ಯಾರ್ಥಿಗಳು ನೀಟ್​ ಪರೀಕ್ಷೆ ಬರೆಯಲಿದ್ದಾರೆ. ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ. ಅಲ್ಲದೇ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್ ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಬರಬೇಕು ಎಂದು ಸೂಚನೆ ನೀಡಲಾಗಿದೆ....