ಭಾರತ, ಏಪ್ರಿಲ್ 16 -- Karnataka CET 2025: ಕರ್ನಾಟಕದಲ್ಲಿ ಎಂಜಿನಿಯರಿಂಗ್, ಮೆಡಿಕಲ್ ಸೇರಿ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಕರ್ನಾಟಕ ಸಿಇಟಿ 2025 ಇಂದು (ಏಪ್ರಿಲ್ 16) ಮತ್ತು ನಾಳೆ (ಏಪ್ರಿಲ್ 17) ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇದನ್ನು ನಡೆಸುತ್ತಿದ್ದು, ಬೆಂಗಳೂರು ಸೇರಿ ಕರ್ನಾಟಕದ 775 ಕೇಂದ್ರಗಳಲ್ಲಿ ಸಿಇಟಿ ನಡೆಯಲಿದೆ. ಸಿಇಟಿಗೆ ಪೂರ್ವಭಾವಿಯಾಗಿ ಏಪ್ರಿಲ್ 15 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಿತು. ಈ ಬಾರಿ ವೆಬ್‌ಕಾಸ್ಟಿಂಗ್ ನಿಗಾದಲ್ಲಿ ಏ.16 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿದೆ.

ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ನೇಮಕಾತಿ ಪರೀಕ್ಷಾ ನಿಯಮಗಳ ಹಾಗೆ ಈ ಪರೀಕ್ಷೆಗೂ ಸಿಸಿ ಕ್ಯಾಮೆರಾ ಕಣ್ಣಾವಲು ಇರುತ್ತದೆ. ವೆಬ್‌ಕಾಸ್ಟಿಂಗ್ ...