ಭಾರತ, ಫೆಬ್ರವರಿ 28 -- Karnataka SSLC Exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ದಕ್ಣಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ (ಫೆ 27) ನಡೆದ ಎಸ್‌ಎಸ್‌ಎಲ್‌ಸಿ ಪ್ರಿಪರೇಟರಿ ಪರೀಕ್ಷೆಯ ವೇಳೆ ಗಣಿತ ಪ್ರಶ್ನೆಪತ್ರಿಕೆಯ ಬದಲು ಶುಕ್ರವಾರ (ಫೆ 28) ನಡೆಯಬೇಕಾಗಿದ್ದ ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆಯನ್ನು ನೀಡಿ ಎಡವಟ್ಟು ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ದಕ್ಣಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ 50 ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಗುರುವಾರ ನಡೆಯಬೇಕಿದ್ದ ಗಣಿತ ಪ್ರಶ್ನೆಪತ್ರಿಕೆ ಬದಲಾಗಿ ಶುಕ್ರವಾರ ನಡೆಯ ಬೇಕಿದ್ದ ದ್ವಿತೀಯ ಭಾಷೆ ಇಂಗ್ಲಿಷ್‌ನ ಪ್ರಶ್ನೆಪತ್ರಿಕೆ ನೀಡಲಾಗಿತ್ತು. ವಿದ್ಯಾರ್ಥಿಗಳು ಕೂಡಲೇ ಪರೀಕ್ಷಾ ಕೊಠಡಿಯಲ್ಲಿದ್ದ ಶಿಕ್ಷಕರಿಗೆ ಈ ಎಡವಟ್ಟಿನ ಕುರಿತು ತಿಳಿಸಿದರು. ಅವರು ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿದರು. ಕೂಡ...