ಭಾರತ, ಫೆಬ್ರವರಿ 12 -- Karnataka SSLC preparatory Exam: ಕರ್ನಾಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಸಲದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದರಂತೆ, ಈ ಹಿಂದೆ ಫೆ 26ರಿಂದ ಶುರುವಾಗಬೇಕಾಗಿದ್ದ ಪರೀಕ್ಷೆಗಳು ಫೆ 25ರಿಂದಲೇ ಶುರುವಾಗಲಿವೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಫೆ 25 ರಿಂದ ಮಾರ್ಚ್ 4ರ ತನಕ ನಡೆಯಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಸಲವೂ ಪೂರ್ವ ಸಿದ್ಧತಾ ಪರೀಕ್ಷೆಗೆ ಏಕ ರೂಪದ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿ ನೀಡಲು ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯು ಎಲ್ಲಾ ಜಿಲ್ಲಾ ಉಪ ನಿರ್ದೇಶಕರಿಗೆ ಆನ್‌ಲೈನ್‌ ಮೂಲಕ ಕಳುಹಿಸಲಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿರುವ ಈ ಸಲದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳು ಫೆ 25 ...