Bangalore, ಮೇ 9 -- ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಈ ಬಾರಿ ಒಟ್ಟಾರೆ ಶೇಕಡ 73.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ನಂಬರ್‌ಗೆ ಫಲಿತಾಂಶ ವಿವರ ಕಳುಹಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರು ಎನ್‌. ಮಂಜೂಷಿ ಹೇಳಿದ್ದಾರೆ. 625ಕ್ಕೆ 625 ಅಂಕ ಪಡೆದ ಅಂಕಿತ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್‌ 25ರಂದು ಆರಂಭವಾಗಿ ಏಪ್ರಿಲ್‌ 6, 2024ರಂದು ಕೊನೆಗೊಂಡಿತ್ತು. ಜೆಟಿಎಸ್‌ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆ ಏಪ್ರಿಲ್‌ 8ರಂದು ನಡೆದಿತ್ತು. ಈ ಬಾರಿ ಅಂದಾಜು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕಳೆದ ವರ್ಷ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು, ಮಂಡ್ಯ ಎರಡನೇ ಸ್ಥಾನ ಪಡೆದಿತ್ತು. ಕಳೆದ ವರ್ಷ 4.25 ಲಕ್ಷಕ್ಕೂ...