Bangalore, ಮೇ 9 -- ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಈ ಬಾರಿ ಒಟ್ಟಾರೆ ಶೇಕಡ 73.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ನಂಬರ್‌ಗೆ ಫಲಿತಾಂಶ ವಿವರ ಕಳುಹಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾದ ಎನ್‌. ಮಂಜೂಷಿ ಹೇಳಿದ್ದಾರೆ.

ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಪಡೆದಿದ್ದಾರೆ. ನಗರ ಪ್ರದೇಶ 3.59 ಲಕ್ಷ ಮಂದಿ ಅಂದರೆ ಶೇಕಡ 72.83 ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶದ 2.71 ಲಕ್ಷ ಅಂದರೆ ಶೇಕಡ 74.17 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಸರ್ಕಾರಿ ಶಾಲೆಯ 2.43 ಲಕ್ಷ ಮಂದಿ ಅಂದರೆ ಶೇಕಡಾ 72.46 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅನುದಾನಿತ ...