Bangalore, ಏಪ್ರಿಲ್ 25 -- ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಎರಡು ವರ್ಷಗಳ ಆಡಳಿತಕ್ಕೆ ಸಾಕ್ಷಿಯಾಗಿ 2025 ರ ಮೇ.20 ರಂದು ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ . "ಹಾಡಿ, ಹಟ್ಟಿ, ತಾಂಡಾಗಳು ಸೇರಿದಂತೆ ಜನ ವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿ ಅಂಗೀಕರಿಸದ ಕಾರಣ ಅಲ್ಲಿನ ನಿವಾಸಿಗಳು ಅನೇಕ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇದಕ್ಕೆ ಪರಿಹಾರ ನೀಡಲು ಕಳೆದ ಎರಡು ವರ್ಷದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಯಿತು. ಅದರಂತೆ ಹಟ್ಟಿ, ತಾಂಡಾ ನಿವಾಸಿಗಳ ತ್ರಿಶಂಕು ಸ್ಥಿತಿ ನಿವಾರಿಸಲು ಹಾಗೂ ಅವರಿಗೆ ಶಾಶ್ವತ ನೆಮ್ಮದಿ ನೀಡುವ ಸಲುವಾಗಿ ತಾಂಡಾಗಳಿಗೆ ಕಂದಾಯ ಗ್ರಾಮ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ.

ಶುಕ್ರವಾರ ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಈ ಮಾಹಿತಿ ನೀಡಿದರು.

ಹಟ್ಟಿ, ತಾಂ...