Bengaluru, ಏಪ್ರಿಲ್ 5 -- ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನಾಯಕತ್ವದಲ್ಲಿ ಸಂಭಾವ್ಯ ಬದಲಾವಣೆ ಮತ್ತು ವಿಧಾನ ಪರಿಷತ್ ನಾಮನಿರ್ದೇಶನಗಳ ವಿಷಯದ ಬಗ್ಗೆ ಚರ್ಚೆಗಳು ಮುಂದುವರೆದಿರುವ ಹಿನ್ನೆಲೆಯಲ್ಲಿ ರಾಜ್ಯ ಘಟಕದ ರಚನೆಯಲ್ಲಿ ಯಾವುದೇ ಹಠಾತ್ ಬದಲಾವಣೆಗಳನ್ನು ಮಾಡಲು ಸಾಧ್ಯವಿಲ್ಲ. ಈ ರೀತಿ ಬದಲಾವಣೆಯನ್ನೂ ಸಹ ಮಾಡಬಾರದು ಎಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಚ್ಚರಿಕೆ ವಹಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹಿಂದೂಸ್ತಾನ್ ಟೈಮ್ಸ್‌ಗೆ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಷತ್ ನೇಮಕಾತಿಗೆ ಸಂಬಂಧಿಸಿದಂತೆ ಇನ್ನೂ ಚರ್ಚೆಗಳು ಪ್ರಗತಿಯಲ್ಲಿವೆ ಎಂದು ಒಪ್ಪಿಕೊಂಡಿದ್ದಾರೆ. ಪರಿಷತ್ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಎರಡು ಸುತ್ತಿನ ಚರ್ಚೆಗಳು ನಡೆದಿವೆ. ಹೆಚ್ಚಿನ ಚರ್ಚೆಗಳ ಅಗತ್ಯವಿದೆ" ಎಂದು ಅವರು ಹೇಳಿದ್ದಾರೆ. ಅಂತಿಮ ನಿರ್ಧಾರ ಮಾಡುವ ಮೊದಲು ದೆಹಲಿಯ ಕಾಂಗ್ರೆಸ್ ನಾಯಕತ್ವವು ಎಲ್ಲ ಪ್ರಸ್ತಾಪಗಳನ್ನು ಮೌಲ್ಯಮಾಪನ ಮಾಡುತ್ತದೆ ಎಂದು ಹ...